30-30 ತಿಂಗಳ ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿದ್ದೇವೆ – ಡಿಕೆ ಶಿವಕುಮಾರ್

ವದೆಹಲಿ: ಅಂತೂ ಇಂತೂ ಕೊನೆಗೂ ಕರ್ನಾಟಕ ಮುಂದಿನ ಸಿಎಂ ಆಯ್ಕೆ ಕಸರತ್ತು ಅಂತ್ಯಕಂಡಿದೆ. ಸಿದ್ಧರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ ಆಗಿ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ 30-30 ತಿಂಗಳ ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ.

 

ಇಂದು ದೆಹಲಿಯ ವೇಣುಗೋಪಾಲ್ ನಿವಾಸದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿಕೆ ಶಿವಕುಮಾರ್, ನಾನು ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ ಎಂದರು.

30-30 ತಿಂಗಳ ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿದ್ದೇವೆ. ಕಾಂಗ್ರೆಸ್ ಪಕ್ಷದ ಹಿತ ದೃಷ್ಠಿಯಿಂದ ಅಧಿಕಾರ ಹಂಚಿಕೆ ಸೂತ್ರ ಪಾಲನೆ ಮಾಡಲಾಗುತ್ತಿದೆ. ಕರ್ನಾಟಕ ಜನರ ಸೇವೆ ಮಾಡಲು ನಾನು ಕಟಿಬದ್ಧನಾಗಿದ್ದೇನೆ ಎಂದರು ತಿಳಿಸಿದರು.

Loading

Leave a Reply

Your email address will not be published. Required fields are marked *