ಜನವರಿ 22 ನಂತರ ಕುಟುಂಬ ಸಮೇತ ಅಯೋಧ್ಯೆಗೆ ಭೇಟಿ: ಅಖಿಲೇಶ್ ಯಾದವ್

ಯೋಧ್ಯೆ: ರಾಮನೂರಿನಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ (Pran Prathistha Ceremony) ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಾವಿರಾರು ಜನರಿಗೆ ಈಗಾಗಲೇ ಆಹ್ವಾನ ಕಳುಹಿಸಲಾಗಿದೆ. ಹೀಗಾಗಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು, ಇನ್ನೂ ಕೆಲವರು ಭಾಗವಹಿಸಲ್ಲ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ಹೈಕಮಾಂಡ್ (Congress High Command) ನಿರಾಕರಿಸಿದೆ. ಇದೀಗ ಅಖಿಲೇಶ್ ಯಾದವ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಇದೀಗ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಸಂಬಂಧ ಅಖಿಲೇಶ್‌ (Akhilesh Yadav) ಅವರು,

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಇದರಲ್ಲಿ ಕಾರ್ಯಕ್ರಮದ ನಂತರ ಬರುವುದಾಗಿ ಹೇಳಿದ್ದಾರೆ. ಜೊತೆಗೆ ಆಹ್ವಾನ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಕೂಡ ಅಲ್ಲಿಸಿದ್ದಾರೆ. ಇದರೊಂದಿಗೆ ಈ ಕಾರ್ಯಕ್ರಮವನ್ನು ಸುರಕ್ಷಿತವಾಗಿ ಪೂರ್ಣಗೊಳಿಸಬೇಕು. ಜನವರಿ 22 ರ ಕಾರ್ಯಕ್ರಮದ ಬಳಿಕ ತಮ್ಮ ಕುಟುಂಬದೊಂದಿಗೆ ಅಯೋಧ್ಯೆಗೆ ಭೇಟಿ ನೀಡುವುದಾಗಿಯೂ ಅಖಿಲೇಶ್‌ ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *