ಮೈಸೂರು: ಜಂಬೂಸವಾರಿಗೆ ಕೆಲ ಗಂಟೆಗಳು ಬಾಕಿ ಇದ್ದು, ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 11 ಐಪಿಎಸ್ ಅಧಿಕಾರಿಗಳು ಸೇರಿ 4,000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಅರಮನೆ ಮೈದಾನಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 1.46ರಿಂದ 2.08ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಪೂಜೆ ನಡೆಯಲಿದೆ. ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿಯಲ್ಲಿನ ತಾಯಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ನಂತರ ಜಂಬೂಸವಾರಿ ಆರಂಭವಾಗುತ್ತದೆ.