avindra Jadeja: ಮತ್ತೊಂದು ದಾಖಲೆ ಬರೆದ ಆಲ್ ರೌಂಡರ್ ರವೀಂದ್ರ ಜಡೇಜಾ

ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಏಷ್ಯಾಕಪ್ ಸೂಪರ್-4 ಪಂದ್ಯದಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತೊಂದು ದಾಖಲೆ ಬರೆದಿದ್ದಾರೆ. ಏಷ್ಯಾಕಪ್ನಲ್ಲಿ ಅತಿ ಹೆಚ್ಚು ಬ್ಯಾಟರ್ಗಳನ್ನು ಪೆವಿಲಿಯನ್ಗೆ ಕಳುಹಿಸಿದ ಭಾರತೀಯ ಬೌಲರ್ ಎಂಬ ಶ್ರೇಯಕ್ಕೆ ಜಡೇಜಾ ಪಾತ್ರರಾಗಿದ್ದಾರೆ. ಈ ಮೂಲಕ ಪಠಾಣ್ ಹಾಗೂ ಸಚಿನ್ ದಾಖಲೆ ಉಡೀಸ್ ಮಾಡಿದ್ದಾರೆ.

ಒಟ್ಟು 23 ವಿಕೆಟ್ ಪಡೆಯುವ ಮೂಲಕ ರವೀಂದ್ರ ಜಡೇಜಾ ಪ್ರಥಮ ಸ್ಥಾನದಲ್ಲಿದ್ದಾರೆ. ಇರ್ಫಾನ್ ಪಠಾಣ್ 22 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದರೆ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ 17 ವಿಕೆಟ್ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಇವರೇ ಹೆಚ್ಚು ವಿಕೆಟ್ ಪಡೆದವರು

ಪ್ರಸ್ತುತ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಶ್ರೀಲಂಕಾ ದಿಗ್ಗಜ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಅವರು 24 ಪಂದ್ಯಗಳಲ್ಲಿ 30 ವಿಕೆಟ್ ಪಡೆದಿದ್ದಾರೆ. ಜಡೇಜಾ ಅವರು 7 ವಿಕೆಟ್ ಪಡೆದಿದ್ದೇ ಆದಲ್ಲಿ ಮುರಳೀಧರನ್ ದಾಖಲೆಯನ್ನು ಸರಿಗಟ್ಟಲಿದ್ದಾರೆ.

Loading

Leave a Reply

Your email address will not be published. Required fields are marked *