ಬೆಂಗಳೂರು:ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ.ಕೃಷಿ ಅಧಿಕಾರಿಗಳಿಂದ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ನನಗೆ ಗೊತ್ತಿಲ್ಲ. ಕೃಷಿ ಜಂಟಿ ನಿರ್ದೇಶಕರ ಜತೆ ಈಗಷ್ಟೇ ಮಾತನಾಡಿದ್ದೇನೆ. ಇದೊಂದು ಫೇಕ್ ಲೆಟರ್ ಎಂಬ ಮಾಹಿತಿ ನೀಡಿದ್ದಾರೆ. ಪಾಪ ಬಹಳ ಹುಡುಕಿ ಹುಡುಕಿ ಏನೇನೋ ಮಾಡುತ್ತಿದ್ದಾರೆ. ಹಾಗೇನಾದರೂ ಆಗಿದ್ದರೇ ತನಿಖೆ ನಡೆಸಲು ಸೂಚಿಸುತ್ತೇನೆ. ನಮ್ಮ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡುವೆ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಹೇಳಿದರು.