ಬೆಂಗಳೂರು : ಕರ್ನಾಟಕದ ನೂತನ ಡಿಜಿ ಹಾಗೂ ಐಜಿಪಿಯಾಗಿ (DG, IGP) ಅಲೋಕ್ ಮೋಹನ್ (Alok Mohan) ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬೆಂಗಳೂರಿನ ನೃಪತುಂಗ ರಸ್ತೆಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ, ನಿರ್ಗಮಿತ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಅವರು ಬ್ಯಾಟನ್ ಹಸ್ತಾಂತರಿಸುವ ಮೂಲಕ ಅಲೋಕ್ ಮೋಹನ್ ಗೆ ಅಧಿಕಾರ ಹಸ್ತಾಂತರ ಮಾಡಿದರು.
ಬಿಹಾರ ಮೂಲದ ಡಾ. ಅಲೋಕ್ ಮೋಹನ್ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ. 1987ನೇ ಬ್ಯಾಚ್ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಡಾ. ಅಲೋಕ್ ಮೋಹನ್ ಅಗ್ನಿಶಾಮಕ ದಳ, ತುರ್ತು ಸೇವೆಗಳ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಾರಾಗೃಹ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ.