ಬೆಂಗಳೂರು: ಬಾಕಿ ಬಿಲ್ ಪಾವತಿಸುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಅದರೆ ರಾಜ್ಯ ಸರ್ಕಾರ ಇದುವರೆಗೆ ಪಾವತಿ ಮಾಡಿಲ್ಲ. ಹಳೇ ಸಮಸ್ಯೆಗಳ ಜೊತೆ ಹೊಸ ಸಮಸ್ಯೆ ಸಹ ಸೇರ್ಪಡೆಯಾಗಿದೆ. ರಾಜ್ಯ ಸರ್ಕಾರದಿಂದ ಇನ್ನೂ 20 ಸಾವಿರ ಕೋಟಿ ಬಾಕಿ ಬರಬೇಕಿದೆ. ಜಲಸಂಪನ್ಮೂಲ, ಸಣ್ಣ ನೀರಾವರಿ,
ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳಿಂದ ಬಾಕಿ ಬರಬೇಕು. ತನಿಖೆ ಹೆಸರಲ್ಲಿ ರಾಜ್ಯ ಸರ್ಕಾರ ಬಾಕಿ ಹಣ ತಡೆಹಿಡಿದಿದೆ. ಕೆಲವು ಇಲಾಖೆಗಳಲ್ಲಿ ಶೇಕಡಾ 7ರಷ್ಟು ಹಣ ಬಿಡುಗಡೆ ಮಾಡಿದ್ದಾರೆ. ಒಂದು ತಿಂಗಳಲ್ಲಿ ಶೇ.50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆಗ್ರಹಿಸಿದರು.