ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ವಿನೂತನ ಥೀಮ್ ಬೇಸ್ಡ್ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಪಿಂಕ್ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಿರಿಧಾನ್ಯ ಮತಗಟ್ಟೆ, ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿ ಮತಗಟ್ಟೆ, ಕ್ರೀಡಾ ಮತಗಟ್ಟೆಗಳೆಂಬ ವಿಶೇಷ ವಿನ್ಯಾಸದ ಮತಗಟ್ಟೆಗಳನ್ನು ಸ್ಥಾಪಿಸುವ ಮೂಲಕ ಮತದಾರರನ್ನು ಸೆಳೆಯಲಾಗುತ್ತಿದೆ.