ಮಾಲೆ: #BoycottMaldives ಅಭಿಯಾನ ಯಶಸ್ವಿಯಾಗಿದ್ದು EaseMyTrip ಮಾಲ್ಡೀವ್ಸ್ ಫ್ಲೈಟ್ ಬುಕ್ಕಿಂಗ್ ರದ್ದು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಟೀಕಿಸಿದ್ದಕ್ಕೆ ಭಾರತೀಯ ನೆಟ್ಟಿಗರು ಮಾಲ್ಡೀವ್ಸ್ ಪ್ರವಾಸವನ್ನು ರದ್ದು ಮಾಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಸೃಷ್ಟಿಸಿದ್ದರು.
ಇದಕ್ಕೆ ಬೆಂಬಲ ವ್ಯಕ್ತಪಡಿಸಿದ EaseMyTrip ಫ್ಲೈಟ್ ಬುಕ್ಕಿಂಗ್ ರದ್ದು ಮಾಡಿದೆ.
ಭಾರತದ ಆನ್‌ಲೈನ್ ಟ್ರಾವೆಲ್ ಕಂಪನಿ EaseMyTrip ಸಿಇಒ ನಿಶಾಂತ್ ಪಿಟ್ಟಿ ಸಾಮಾಜಿಕ ಜಾಲತಾಣದಲ್ಲಿ ಭಾರತೀಯರಿಗೆ ಬೆಂಬಲ ವ್ಯಕ್ತಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಭಾರತೀಯ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ (Maldives govt) ಅಮಾನುತು ಮಾಡಿದೆ. ಮೋದಿ ವಿರುದ್ಧ ಕೀಳು ಅಭಿರುಚಿಯುಳ್ಳ ಹೇಳಿಕೆ ನೀಡಿದ್ದ ಮಾರಿಯಂ ಶಿಯುನಾ, ಮಲ್ಲಾ ಷರೀಫ್ ಹಾಗೂ ಮಝೂಂ ಮಜೀದ್ ಅವರನ್ನು ಅಮಾನತು ಮಾಡಲಾಗಿದೆ.
ಪ್ರಧಾನಿ ಮೋದಿ ಕುರಿತಾಗಿ ಎರಡು ದೇಶಗಳ ಮಧ್ಯೆ ಬಿಕಟ್ಟು ಸೃಷ್ಟಿಯಾಗಿತ್ತು. ಸ್ವತ: ಮಾಲ್ಡೀವ್ಸ್ ಜನರೇ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಅಧ್ಯಕ್ಷ ಮೊಹಮ್ಮದ್ ಮಿಜು (Mohamed Muizzu) ನೇತೃತ್ವದ ಸರ್ಕಾರ ಅಮಾನತು ಮಾಡುವ ಮೂಲಕ ಶಿಸ್ತು ಕ್ರಮ ಜರುಗಿಸಿದೆ.