ಟೋಕಿಯೊ: ಜನವರಿ 1 ರಂದು ಸಂಭವಿಸಿದ 7.5 ತೀವ್ರತೆಯ ಭೂಕಂಪವು, ಹೊನ್ಶು ಮುಖ್ಯ ದ್ವೀಪದ ಇಶಿಕಾವಾ ಪ್ರಾಂತ್ಯದಲ್ಲಿ ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಜೊತೆಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹುಟ್ಟುಹಾಕಿತು. ಇದರಿಂದ 62 ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರಿಕೆಯಾಗುತ್ತಿದೆ.
ಭೂಕಂಪದ ನಂತರ ಭೂಕುಸಿತಗಳು ಮತ್ತು ಭಾರೀ ಮಳೆಯಾಗುವ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ನೂರಾರು ಕಟ್ಟಡಗಳು ಬೆಂಕಿಯಿಂದ ಧ್ವಂಸಗೊಂಡಿವೆ. ವಾಜಿಮಾ ಮತ್ತು ಸುಜು ಸೇರಿದಂತೆ ಹಲವಾರು ಪಟ್ಟಣಗಳಲ್ಲಿ ಮನೆಗಳನ್ನು ನೆಲಸಮವಾಗಿವೆ. ಪ್ರಿಫೆಕ್ಚರ್‌ನ ನೋಟೊ ಪೆನಿನ್ಸುಲಾವು ತೀವ್ರ ಪ್ರಮಾಣದಲ್ಲಿ ಹಾನಿಗೊಳಗಾಗಿದೆ.
ಭೂಕಂಪದಿಂದ ಜಪಾನ್ ತತ್ತರಿಸಿದ್ದು, 62 ಜನರು ಸಾವನ್ನಪ್ಪಿದ್ದಾರೆ. 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದೆ. 31,800 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ರಕ್ಷಣೆ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ.