ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿಗೆ ಗುಡ್ ಬೈ ಹೇಳಿ ಇಂದು ಕೈ ಹಿಡಿಯಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಚಿವರಾದ ಜಿ.ಪರಮೇಶ್ವರ್, ಕೆ ಎನ್ ರಾಜಣ್ಣ ಸಮ್ಮುಖದಲ್ಲಿ ಸೇರ್ಪಡೆಗೆ ಸಿದ್ದತೆ ನಡೆಸಲಾಗುತ್ತಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಮುದ್ದಹನುಮೇಗೌಡ ಅವರು ಬಿಜೆಪಿ ಸೇರಿದ್ದರು. ಆದರೆ ಬಿಜೆಪಿಯಲ್ಲೂ ವಿಧಾನಸಭಾ ಟಿಕೆಟ್ ವಂಚಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ತಮ್ಮ ಮಾತೃಪಕ್ಷದತ್ತ ಮುಖ ಮಾಡಿದ್ದಾರೆ.