ಕೇರಳದಲ್ಲಿ ಮೊದಲ ಪ್ರಕರಣ ವರದಿಯಾದ ನಂತರ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳಲ್ಲಿ ತ್ವರಿತಗತಿಯಲ್ಲಿ ಏರಿಕೆ ಕಂಡುಬಂದಿದೆ. ಏತನ್ಮಧ್ಯೆ, ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡುವಂತೆ ಸೂಚನೆ ನೀಡಿದೆ.
ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್ ಮತ್ತೆ ಭೀತಿ ಹುಟ್ಟಿಸಿದೆ. ಹೋಂ ಐಸೋಲೇಷನ್ ಕಡ್ಡಾಯಗೊಳಿಸುವುದು, ಕ್ವಾರಂಟೈನ್ ಆದವರ ಮೇಲೆ ಹೆಚ್ಚು ನಿಗಾ ಇಡುವುದು, ಕೋವಿಡ್ ಟೆಸ್ಟ್ ಹೆಚ್ಚಳ, ನೆರೆ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇಡುವುದು ಹಾಗೂ ಆಕ್ಸಿಜನ್, ವೆಂಟಿಲೇಟರ್ ಹಾಗೂ ವೈದ್ಯಕೀಯ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲು ಉದ್ದೇಶಿಸಿದೆ.