ಕಾಂಗ್ರೆಸ್ ಸರ್ಕಾರದಲ್ಲಿ ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ : ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಳೆ ಮಧ್ಯಾಹ್ನ 12.30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ನಡುವೆ ಸಚಿವ ಸ್ಥಾನಕ್ಕಾಗಿ ಹಲವರ ನಡುವೆ ಪೈಪೋಟಿ ಶುರುವಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ಹಲವರು ಲಾಭಿ ನಡೆಸುತ್ತಿದ್ದಾರೆ.

ಹೌದು, ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದಾರೆ. ಈ ನಡುವೆ ಸಚಿವ ಸ್ಥಾನಕ್ಕಾಗಿ ಹಲವರು ಲಾಭಿ ನಡೆಸುತ್ತಿದ್ದು, ಹೀಗಾಗಿ ಇಂದು ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ಜೊತೆಗೆ ಸಚಿವ ಸಂಪುಟ ರಚನೆ ಸಂಬಂಧ ಚರ್ಚೆ ನಡೆಸಲಿದ್ದಾರೆ.

ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಹೈಕಮಾಂಡ್ ಕೆಲ ಸೂತ್ರಗಳನ್ನು ಸಿದ್ಧಪಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್‌ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್‌ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್‌ ಕನುಗೋಲು ಸೇರಿ ಸಚಿವರ ಶಾರ್ಟ್ ಲಿಸ್ಟ್ ಮಾಡಿದ್ದಾರೆ ಎನ್ನಲಾಗಿದೆ.

ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಬೆಳಗಾವಿ-ಲಕ್ಷ್ಮಣ ಸವದಿ, ಲಕ್ಷ್ಮಿ ಹೆಬ್ಬಾಳ್ಕರ್‌. ಸತೀಶ್‌ ಜಾರಕಿಹೊಳಿ

ಬಾಗಲಕೋಟೆ – ಆರ್.ಬಿ.ತಿಮ್ಮಾಪುರ

ಹಾವೇರಿ – ರುದ್ರಪ್ಪ ಲಮಾಣಿ

ಬಳ್ಳಾರಿ – ತುಕಾರಾಮ್‌, ನಾಗೇಂದ್ರ

ಚಿತ್ರದುರ್ಗ – ರಘುಮೂರ್ತಿ

ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್​ಎಸ್​ ಮಲ್ಲಿಕಾರ್ಜುನ

ಶಿವಮೊಗ್ಗ – ಮಧು ಬಂಗಾರಪ್ಪ, ಬಿ.ಕೆ.ಸಂಗಮೇಶ್

ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ

ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. ಶ್ರೀನಿವಾಸ್, ಕೆಎನ್ ರಾಜಣ್ಣ

ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ

ಕೋಲಾರ- ರೂಪ ಶಶೀಧರ್,ನಾರಾಯಣ ಸ್ವಾಮಿ

ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್

ಕಲಬುರಗಿ – ಪ್ರಿಯಾಂಕ್‌ ಖರ್ಗೆ, ಅಜಯ್‌ ಸಿಂಗ್, ಶರಣ ಪ್ರಕಾಶ್ ಪಾಟೀಲ್

ರಾಯಚೂರು – ಬಸನಗೌಡ ತುರುವಿಹಾಳ/ಹಂಪನಗೌಡ ಬಾದರ್ಲಿ

ಯಾದಗಿರಿ – ಶರಣಪ್ಪ ದರ್ಶನಾಪುರ್

ಬೀದರ್ – ರಹೀಮ್‌ ಖಾನ್, ಈಶ್ವರ್‌ ಖಂಡ್ರೆ

ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ

ಗದಗ – ಹೆಚ್‌.ಕೆ. ಪಾಟೀಲ್

ಧಾರವಾಡ – ವಿನಯ್‌ ಕುಲಕರ್ಣಿ, ಪ್ರಸಾದ್‌ ಅಬ್ಬಯ್ಯ,ಸಂತೋಷ್ ಲಾಡ್

ಉತ್ತರ ಕನ್ನಡ – ಭೀಮಣ್ಣ ನಾಯಕ್

ಬೆಂಗಳೂರು- ಕೆಜೆ ಜಾರ್ಜ್​/ ರಾಮಲಿಂಗಾ ರೆಡ್ಡಿ, ಹ್ಯಾರಿಸ್​, ಎಂ. ಕೃಷ್ಣಪ್ಪ, ದಿನೇಶ್​ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್

ಬೆಂಗಳೂರು ಗ್ರಾಮಾಂತರ. ಕೆಚ್​​ ಮುನಿಯಪ್ಪ

ಮಂಡ್ಯ- ಎನ್​​ ಚೆಲುವರಾಯ ಸ್ವಾಮಿ

ಮಂಗಳೂರು- ಯುಟಿ ಖಾದರ್

ಮೈಸೂರು-ಎಚ್​ಸಿ ಮಾಹದೇವಪ್ಪ,ತನ್ವೀರ್​ ಸೇಠ್

​ಚಾಮರಾಜನಗರ- ಪುಟ್ಟರಂಗಶೆಟ್ಟಿ

ಕೊಡಗು- ಎ.ಎಸ್​ ಪೊನ್ನಣ್ಣ

Loading

Leave a Reply

Your email address will not be published. Required fields are marked *