ಕಣಿವೆಗೆ ಬಿದ್ದ ಸೇನಾ ವಾಹನ: 9 ಯೋಧರು ಹುತಾತ್ಮ

ಲೇಹ್: ದಕ್ಷಿಣ ಲಡಾಖ್‌ನ (Ladakh) ನ್ಯೋಮಾದಲ್ಲಿ ಭಾರತೀಯ ಸೇನಾ ವಾಹನ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಸೈನಿಕರು (Soldiers) ಹುತಾತ್ಮರಾಗಿದ್ದು, ಮತ್ತೊಬ್ಬ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಮೃತರಲ್ಲಿ 8 ಮಂದಿ ಯೋಧರು ಮತ್ತು ಒಬ್ಬರು ಕಮಿಷನ್ಡ್ ಆಫೀಸರ್ (ಜೆಸಿಒ) ಆಗಿದ್ದರು. ಸೇನಾ ಟ್ರಕ್ (Army Vehicle) ಗ್ಯಾರಿಸನ್‌ನಿಂದ ಲೇಹ್ ಬಳಿಯ ಕ್ಯಾರಿಗೆ ಚಲಿಸುತ್ತಿದ್ದ ಸಂದರ್ಭ ಕ್ಯಾರಿ ಪಟ್ಟಣದಿಂದ 7 ಕಿ.ಮೀ. ಮುಂದೆ ಕಮರಿಗೆ ಬಿದ್ದಿದೆ.

ಶನಿವಾರ ಸಂಜೆ 6:30ರ ಸುಮಾರಿಗೆ ಘಟನೆ ನಡೆದಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಸಾಮಾಜಿಕ ಜಾಲತಾಣದಲ್ಲಿ ಮೃತ ಯೋಧರಿಗೆ ಸಂತಾಪ ಸೂಚಿಸಿದ್ದಾರೆ. ಲಡಾಖ್‌ನ ಲೇಹ್ ಬಳಿ ಅಪಘಾತದಿಂದಾಗಿ ಭಾರತೀಯ ಸೇನಾ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ಬಹಳ ದುಃಖವನ್ನುಂಟುಮಾಡಿದೆ. ನಮ್ಮ ದೇಶಕ್ಕೆ ಅವರ ಆದರ್ಶ ಸೇವೆಯನ್ನು ಎಂದಿಗೂ ಮರೆಯುವುದಿಲ್ಲ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ರಾಜನಾಥ್ ಸಿಂಗ್ ಟ್ವೀಟ್ (Tweet) ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

Loading

Leave a Reply

Your email address will not be published. Required fields are marked *