ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣಾವರ ರೈಲ್ವೆ ನಿಲ್ದಾಣದ ಬಳಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಉನ್ನಿಸುರೇಶ್(24) ಬಂಧಿತ ಆರೋಪಿ. ಬಂಧಿತನ ಬಳಿ ಇದ್ದ 70 ಸಾವಿರ ಮೌಲ್ಯದ MDMA ವಶಕ್ಕೆ ಪಡೆಯಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.