ಬೆಂಗಳೂರು: ನಾನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಟ್ಟ ಮಾತಿನಂತೆ ನಾನು ಪಕ್ಷವನ್ನು ಗೆಲುವಿನ ದಡ ಸೇರಿಸಿದ್ದೇನೆ. ನನ್ನ ಮೇಲೆ ಬಿಜೆಪಿ ಷಡ್ಯಂತ್ರ ರೂಪಿಸಿ ಬಿಜೆಪಿ ಸೇರಬೇಕು ಅಥವಾ ಜೈಲಿಗೆ ಹೋಗಬೇಕು ಎಂಬ ಆಯ್ಕೆ ಇಟ್ಟಾಗ ನಾನು ಜೈಲಿಗೆ ಹೋಗುವುದನ್ನು ಆರಿಸಿಕೊಂಡೆ.
ಆಗ ಸೋನಿಯಾ ಗಾಂಧಿ ಅವರು ತಿಹಾರ್ ಜೈಲಿಗೆ ಬಂದು ನನ್ನನ್ನು ಭೇಟಿ ಮಾಡಿದ್ದರು. ಅವರು ನನ್ನ ಮೇಲೆ ಅಷ್ಟು ನಂಬಿಕೆ ಇಟ್ಟಿದ್ದರು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಚುನಾವಣಾ ಫಲಿತಾಂಶ ಕುರಿತು ಭಾವುಕರಾಗಿ ಪ್ರತಿಕ್ರಿಯಿಸಿದಂತ ಅವರು, ಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಛಳ ಬಹುಮತ ನೀಡಿದ್ದಾರೆ ಎಂದರು.