ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ವರ್ಗಾವಣೆ ಅಂಗಡಿ ತೆರೆದಿದ್ದರು: ಆರ್.ಅಶೋಕ್

ಬೆಂಗಳೂರು: ಡಿ.ಕೆ ಶಿವಕುಮಾರ್ ಜನರ ಹಿತ ಹಾಗೂ ಕಷ್ಟಗಳನ್ನು ಕಡೆಗಣಿಸಿ ತೆಲಂಗಾಣಕ್ಕೆ ಹೋಗಿದ್ದಾರೆ ಎಂದು ಡಿಕೆಶಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಇಲ್ಲಿನ ಜನರ ಕಷ್ಟಗಳ ಬಗ್ಗೆ ಮಾತಾಡುತ್ತಿದ್ದೇವೆ. ಆದರೆ ಡಿ.ಕೆ ಶಿವಕುಮಾರ್ ಜನರ ಹಿತ ಹಾಗೂ ಕಷ್ಟಗಳನ್ನು ಕಡೆಗಣಿಸಿ ತೆಲಂಗಾಣಕ್ಕೆ ಹೋಗಿದ್ದಾರೆ. ತೆಲಂಗಾಣ ಶಾಸಕರಿಗೆ ಯಾವ ಹೋಟೆಲ್‍ನಲ್ಲಿ ಇರಿಸಬೇಕು.

ಮಟನ್ ಬಿರಿಯಾನಿ ಇಲ್ಲವೇ ಚಿಕನ್ ಬಿರಿಯಾನಿ ಕೊಡಿಸಬೇಕಾ ಅಂತ ವಿಚಾರಿಸಲು ತೆರಳಿದ್ದಾರೆ ಎಂದು ಡಿಕೆಶಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಡಿಕೆಶಿಗೆ ತೆಲಂಗಾಣದ ಶಾಸಕರ ಹಿತವೇ ಮುಖ್ಯವಾಗಿದೆ. ಸರ್ಕಾರ ಬಂದಾಗಿಂದ 60 ತಪ್ಪುಗಳಾಗಿವೆ. ಅಧಿಕಾರಕ್ಕೆ ಬಂದ ಕೂಡಲೇ ವರ್ಗಾವಣೆ ಅಂಗಡಿ ತೆರೆದಿದ್ದರು. ಅಲ್ಲದೇ ಐಟಿ ದಾಳಿಯಾಗಿ ಇವರ ಲೂಟಿ ಹಣ ಸಿಕ್ಕಿದೆ. ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಹೋರಾಟ ಮಾಡಲಿದೆ. ನಿಲುವಳಿಗಳನ್ನೂ ಒಟ್ಟಾಗಿ ಮಂಡಿಸಿ ಚರ್ಚೆ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

Loading

Leave a Reply

Your email address will not be published. Required fields are marked *