R Ashwin: ಕಪಿಲ್ ದೇವ್ ದಾಖಲೆ ಸರಿಗಟ್ಟಿದ ಅಶ್ವಿನ್!

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದಿದ್ದು, ಟೀಮ್ ಇಂಡಿಯಾ ಪಾರುಪತ್ಯ ಮೆರೆದಿದೆ. ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವನ್ನು 246 ರನ್​ಗಳಿಗೆ ಕಟ್ಟಿಹಾಕಿದ ಭಾರತ ತಂಡವು 436 ರನ್​ ಬಾರಿಸಿ 190 ರನ್​ಗಳ ಮುನ್ನಡೆ ಸಾಧಿಸಿತು.

ಇದಾದ ಬಳಿಕ ಶುರುವಾದ ಇಂಗ್ಲೆಂಡ್ ತಂಡದ ದ್ವಿತೀಯ ಇನಿಂಗ್ಸ್​ನಲ್ಲೂ ಟೀಮ್ ಇಂಡಿಯಾ ಬೌಲರ್​ಗಳು ಪರಾಕ್ರಮ ಮೆರೆದರು. ಪರಿಣಾಮ 180 ರನ್​ಗಳಿಸುಷ್ಟರಲ್ಲಿ ಇಂಗ್ಲೆಂಡ್ ತಂಡವು ಅಗ್ರ ಕ್ರಮಾಂಕದ 5 ವಿಕೆಟ್​ಗಳನ್ನು ಕಳೆದುಕೊಂಡಿತು. ಇದರಲ್ಲಿ ನಾಯಕ ಬೆನ್ ಸ್ಟೋಕ್ಸ್​ ಕೂಡ ಸೇರಿದ್ದರು.

ಮೊದಲ ಇನಿಂಗ್ಸ್​ನಲ್ಲಿ 70 ರನ್ ಬಾರಿಸಿ ಇಂಗ್ಲೆಂಡ್ ತಂಡಕ್ಕೆ ಆಸರೆಯಾಗಿದ್ದ ಬೆನ್ ಸ್ಟೋಕ್ಸ್ (6) ಅವರನ್ನು ಈ ಬಾರಿ ಅಶ್ವಿನ್ ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಬೆನ್ ಸ್ಟೋಕ್ಸ್​ರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಹಿರಿಮೆ ರವಿಚಂದ್ರನ್ ಅಶ್ವಿನ್ ಪಾಲಾಯಿತು. ಅಷ್ಟೇ ಅಲ್ಲದೆ ಟೆಸ್ಟ್ ಕ್ರಿಕೆಟ್​ನಲ್ಲಿ ಒಬ್ಬನೇ ಆಟಗಾರನನ್ನು ಅತ್ಯಧಿಕ ಬಾರಿ ಔಟ್ ಮಾಡಿದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೂ ಅಶ್ವಿನ್ ಪಾತ್ರರಾದರು.

Loading

Leave a Reply

Your email address will not be published. Required fields are marked *