Asia cup: ಪಾಕಿಸ್ತಾನ ತಂಡಕ್ಕೆ ದೊಡ್ಡ ಆಘಾತ

ಪಾಕ್ ಇದೀಗ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ. ಸೂಪರ್ 4 ಸುತ್ತಿನ ಭಾರತ ವಿರುದ್ಧದ ಪಂದ್ಯದಲ್ಲಿ 228 ರನ್ಗಳ ಸೋಲು ಕಂಡಿದ್ದ ಪಾಕ್, ಆ ಬಳಿಕ ಶ್ರೀಲಂಕಾ ವಿರುದ್ಧವೂ ಸೋತಿದೆ. ಹೀಗಾಗಿ ಐಸಿಸಿ ಏಕದಿನ ತಂಡಗಳ ಶ್ರೇಯಾಂಕದಲ್ಲಿ ಬದಲಾವಣೆ ಕಂಡು ಬಂದಿದೆ. ಏಷ್ಯಾಕಪ್ ಆರಂಭಕ್ಕೂ ಮುನ್ನ ಪಾಕ್ ತಂಡ ಏಕದಿನ ಶ್ರೇ
ಆಸ್ಟ್ರೇಲಿಯಾ: ಪ್ರಸ್ತುತ ಆಸ್ಟ್ರೇಲಿಯಾ ತಂಡ 118 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಇಂದು ಮತ್ತು ಸೆಪ್ಟೆಂಬರ್ 17 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಸೀಶ್ ಎರಡು ಏಕದಿನ ಪಂದ್ಯವನ್ನಾಡಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಮುನ್ನಡೆ ಸಾಧಿಸಿದ್ದು ಉಳಿದಿರುವ ಎರಡೂ ಪಂದ್ಯಗಳಲ್ಲಿ ಆಸ್ಟ್ರೇಲಿಯ ಸೋತರೆ, ಒಂದು ಅಂಕವನ್ನು ಕಳೆದುಕೊಳ್ಳುತ್ತದೆ.
ಭಾರತ: ಹಾಗೆಯೇ ಭಾರತ ತಂಡ 116 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಏಷ್ಯಾಕಪ್ನಲ್ಲಿ ಎರಡು ಪಂದ್ಯಗಳ ನಂತರ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯೊಂದಿಗೆ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರುವುದು ಸುಲಭವಾಗಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ ಗೆದ್ದರೆ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋತರೆ, ಭಾರತ ಇಂದು ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಲಿದೆ.
ಪಾಕಿಸ್ತಾನ: ಏಷ್ಯಾಕಪ್ನಲ್ಲಿ ಕಳಪೆ ಪ್ರದರ್ಶನ ನೀಡಿದ ಪಾಕಿಸ್ತಾನ ಇದೀಗ ಅಗ್ರಸ್ಥಾನ ಕಳೆದುಕೊಂಡಿದ್ದು, 115 ಅಂಕ ಗಳಿಸಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಏಕದಿನ ವಿಶ್ವಕಪ್ಗೂ ಮುನ್ನ ಯಾವುದೇ ಏಕದಿನ ಪಂದ್ಯ ನಡೆಯದ ಕಾರಣ ಅಗ್ರಸ್ಥಾನವನ್ನು ಮರಳಿ ಪಡೆಯಲು ಪಾಕಿಸ್ತಾನಕ್ಕೆ ಅವಕಾಶವಿಲ್ಲ. ಹೀಗಾಗಿ ಅಗ್ರ ಸ್ಥಾನಕ್ಕಾಗಿ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಪೈಪೋಟಿ ಏರ್ಪಟ್ಟಿದೆ.

Loading

Leave a Reply

Your email address will not be published. Required fields are marked *