ಮಂಡ್ಯ: ಹಲವಾರು ದಶಕಗಳಿಂದ ಕಾವೇರಿ ಸಮಸ್ಯೆ ಹಾಗೇ ಉಳಿದಿದೆ. ಆದ್ಯತೆ ಮೇರೆಗೆ ಕುಡಿಯುವ ನೀರು ಕೊಡಬೇಕು ಎಂದು ಮಂಡ್ಯದಲ್ಲಿ ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ‘ಸುಪ್ರೀಂ’ ಆದೇಶ ವಿಚಾರ ‘ಪ್ರಜೆಗಳ ಹಿತವನ್ನು ಕಾಪಾಡುವ ಕೆಲಸ ಯಾವುದೇ ಸರ್ಕಾರ ಮಾಡಲಿ. ಸದ್ಯ ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳುವ ಸ್ಥಿತಿ ಬಂದಿದೆ.
ವಸ್ತುಸ್ಥಿತಿ ಬಗ್ಗೆ ಸುಪ್ರೀಂಕೋರ್ಟ್ಗೆ ಸರ್ಕಾರ ಸೂಕ್ತ ಮನವರಿಕೆ ಮಾಡಲಿ ಎಂದು ಹೇಳಿದರು. ‘ನಾವು ಕೂಡ ರಾಜ್ಯ ಹಾಗೂ ಕೇಂದ್ರ ಸಚಿವರ ಜೊತೆ ಮಾತನಾಡುತ್ತೇವೆ. ಆದಷ್ಟು ಬೇಗ ಮೇಕೆದಾಟು ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಿ ನಿರ್ಮಲಾನಂದನಾಥ ಶ್ರೀ ಹೇಳಿದರು.