ಬೆಂಗಳೂರು ;- ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ವ್ಯಾಪ್ತಿಯಲ್ಲೇ 23 ಕಡೆ ಲೋಕಾಯುಕ್ತ ರೇಡ್ ಮಾಡಲಾಗಿದೆ.ಮಹದೇವಪುರ ವಲಯದ ಬಿಬಿಎಂಪಿ RI ನಟರಾಜ್ ಮನೆ ಮೇಲೆ ದಾಳಿ. ಅಧಿಕಾರಿ ನಟರಾಜು ಮನೆಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ನಟರಾಜು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಹಣ ಪಡೆಯುವಾಗ ನಟರಾಜ್ ಟ್ರಾಪ್ ಆಗಿದ್ದರು.ಬೆಂಗಳೂರು ಒಂದರಲ್ಲೇ ಹತ್ತಕ್ಕೂ ಹೆಚ್ಚುಕಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು ಕಡತಗಳನ್ನು ಪರಿಶೀಲಿಸುತ್ತಿದ್ದಾರೆ