ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ವಿಧಾನ ಪರಿಷತ್ನ ಮಾಜಿ ಸದಸ್ಯ, ಜೆಡಿಎಸ್ ನಾಯಕ ಆಯನೂರು ಮಂಜುನಾಥ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಆಯನೂರು ಮಂಜುನಾಥ ಸೋಲು ಕಂಡಿದ್ದರು.
ಭಾನುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನಿವಾಸದಲ್ಲಿ ಆಯನೂರು ಮಂಜುನಾಥ ಭೇಟಿ ಮಾಡಿದರು. ಆಯನೂರು ಮಂಜುನಾಥ ಕಾಂಗ್ರೆಸ್ ಸೇರಲಿದ್ದಾರೆ? ಎಂಬ ಸುದ್ದಿಗಳ ನಡುವೆ ಈ ಭೇಟಿ ನಡೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ನಾಯಕರೊಬ್ಬರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ಶಿವಮೊಗ್ಗದ ರಾಜಕೀಯ ಲೆಕ್ಕಾಚಾರವನ್ನು ಬದಲಾವಣೆ ಮಾಡಲಿದೆಯೇ? ಎಂದು ಕಾದು ನೋಡಬೇಕಿದೆ.