ಬೆಂಗಳೂರು: ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಹಿನ್ನೆಲೆ ರಾಜ್ಯದ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಅಲರ್ಟ್ ಆದ ಪೊಲೀಸ್ ಇಲಾಖೆ, ರೈಲು ನಿಲ್ದಾಣದಲ್ಲಿ ಬಾಂಬ್ ಪತ್ತೆ ದಳ, ಶ್ವಾನದಳದಿಂದ ತಪಾಸಣೆ ಮಾಡಲಾಗಿದೆ. ಜೊತೆಗೆ ರೈಲ್ವೆ ಪ್ರಯಾಣಿಕರ ಬ್ಯಾಗ್ಗಳನ್ನು ಸಹ ಪರಿಶೀಲಿಸಿದ್ದಾರೆ.
ಟಾರ್ಗೆಟ್ ಬೆಂಗಳೂರು: ಶಂಕಿತ ಉಗ್ರರು ಬೆಂಗಳೂರು ಸಿಟಿಯನ್ನೇ ಟಾರ್ಗೆಟ್ ಮಾಡಿದ್ದರು. ಪೊಲೀಸರ ಮಾಹಿತಿ ಪ್ರಕಾರ ಅರೆಸ್ಟ್ ಆದ ಎಲ್ಲಾ ಶಂಕಿತರು ಬೆಂಗಳೂರು ಸ್ಥಳೀಯ ನಿವಾಸಿಗಳೇ ಆಗಿದ್ದಾರೆ. ಉಗ್ರರ ಜೊತೆ ಕಾಂಟ್ಯಾಕ್ಟ್ ಆಗಿ ವಿಧ್ವಂಸಕ ಕೃತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದರು. ಬೆಂಗಳೂರಿನಲ್ಲಿ ಎಲ್ಲೆಲ್ಲಿ ಬ್ಲಾಸ್ಟ್ ಮಾಡಬೇಕು? ಏನು ಅನ್ನೋದರ ಬಗ್ಗೆಯೂ ಟ್ರೈನಿಂಗ್ ಪಡೆದಿದ್ದರು. ಶಂಕಿತರ ಟೀಂ ಎಲ್ಲಾ ಕಡೆಯೂ ಆಕ್ಟೀವ್ ಆಗಿತ್ತು. ಬೆಂಗಳೂರಿನ ಸುಮಾರು ಹತ್ತು ಕಡೆ ಬ್ಲಾಸ್ಟಿಂಗ್ ಗೆ ಪ್ಲಾನ್ ಮಾಡಿದ್ದ ಮಾಹಿತಿ ಸಿಕ್ಕಿದೆ. ಎಲ್ಲಾ ಪ್ಲಾನ್ ಮಾಡಿಕೊಂಡು ಎಕ್ಸಿಕ್ಯೂಟ್ಗೆ ಕಾಯುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.
ರೌಡಿಗಳಾಗಿದ್ದ ಶಂಕಿತರು: ಬೆಂಗಳೂರಿನಲ್ಲಿ ಸದ್ದಿಲ್ಲದೆ ವಿಧ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿದ್ದ ಶಂಕಿತರು ಅಸಲಿಗೆ ರೌಡಿಗಳಾಗಿದ್ದರು. ಇವರೆಲ್ಲ 2017ರಲ್ಲಿ ಆರ್ ಟಿ ನಗರದಲ್ಲಿ ನೂರ್ ಅಹ್ಮದ್ನ ಕಿಡ್ನಾಪ್ ಕಮ್ ಮರ್ಡರ್ ಕೇಸ್ ನ ಆರೋಪಿಗಳು. ಈ ಕೇಸಲ್ಲಿ 21 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕೊಲೆ ಮಾಡಿ ಜೈಲು ಸೇರಿದ ರೌಡಿಗಳಿಂದ ಇದೀಗ ಬ್ಲ್ಯಾಸ್ಟ್ ಗೆ ಸಂಚು ರೂಪಿಸಲಾಗುತ್ತಿತ್ತು.