ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂ ಪ್ರಕಟವಾಗುತ್ತಿದೆ. ಈ ನಡುವೆ ಕಾಂಗ್ರೆಸ್ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದು ನಿಶ್ಚಿತವಾಗಿದೆ. ಈ ನಡುವೆ ಇಂದು ಸಂಜೆಯೇ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾಗುವ ಸಿಎಂ ಬಸವರಾಜ ಬೊಮ್ಮಾಯಿವರು ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ ಎನ್ನಲಾಗಿದೆ.

ಈ ನಡುವೆ ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿವರು ಈ ಬಾರಿಯ ಚುನಾವಣೆಯಲ್ಲಿ ಎನೆಲ್ಲ ಕೊರತೆಗಳಾಗಿವೆ ಎಂಬುದರ ಬಗ್ಗೆ ಗಮನಹರಿಸಲಾಗುತ್ತದೆ. ಸಂಪೂರ್ಣ ಫಲಿತಾಂಶ ಬಂದ ನಂತರ ಈ ಬಗ್ಗೆ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ. ಈ ಫಲಿತಾಂಶವನ್ನು ಒಪ್ಪಿಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪುಟಿದೆದ್ದು ಬರಲಿದೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Loading

Leave a Reply

Your email address will not be published. Required fields are marked *