ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ನಾಳೆ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ, ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ಶನಿವಾರದಿಂದಲೂ ರಾತ್ರಿ ವೇಳೆ ಧಾರಾಕಾರ ಮಳೆಯಾಗಿದ್ದು, ಕೃಷಿಕರು ತೊಂದರೆಗೆ ಒಳಗಾಗಿದ್ದಾರೆ. ಕಾಫಿ ಕೊಯ್ಲು, ಭತ್ತ ಹಾಗೂ ರಾಗಿ ಪೈರಿನ ಕಟಾವಿಗೂ ಸಮಸ್ಯೆಯಾಗಿದೆ. ಕಣದಲ್ಲಿ ಒಣಗಲು ಹಾಕಿದ್ದ ಕಾಫಿ ಮಳೆಯಲ್ಲಿ ತೊಯ್ದು ಹೋಗಿದೆ ಎಂದು ಕೃಷಿಕರು ಅಳಲು ತೋಡಿಕೊಂಡಿದ್ದಾರೆ.