ಬದುಕಿರುವುದಕ್ಕಿಂತ ಜೈಲಿನಲ್ಲೇ ಸಾಯುವುದು ಉತ್ತಮ: ನರೇಶ್‌ ಗೋಯಲ್‌

ಮುಂಬೈ: ಬದುಕಿನ ಎಲ್ಲ ಭರವಸೆಯನ್ನೂ ಕಳೆದುಕೊಂಡಿದ್ದೇನೆ. ಹೀಗಾಗಿ ನಾನು ಈಗಿರುವ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸಾಯುವುದೇ ಉತ್ತಮ ಎಂದು ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ (Jet Airways Founder Naresh Goyal) ಹೇಳಿದ್ದಾರೆ.

ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಆರೋಪಿಯಾಗಿರುವ ಅವರು ಶನಿವಾರ ವಿಶೇಷ ನ್ಯಾಯಾಲದಯಲ್ಲಿ (Special Court) ಈ ಮಾತನ್ನು ಹೇಳಿದರು. ಬ್ಯಾಂಕ್ ವಂಚನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಕಳೆದ ವರ್ಷ ಸೆಪ್ಟೆಂಬರ್ 1 ರಂದು ಗೋಯಲ್ ಅವರನ್ನು ಬಂಧಿಸಿತ್ತು. ಅವರು ಪ್ರಸ್ತುತ ಇಲ್ಲಿನ ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ವಿಶೇಷ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರ ಮುಂದೆ ಗೋಯಲ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗಾಗಿ ಗೋಯಲ್ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಗೋಯಲ್‌ ಅವರು ಕೆಲವು ನಿಮಿಷಗಳ ವೈಯಕ್ತಿಕ ವಿಚಾರಣೆಗೆ ಮನವಿ ಮಾಡಿದ್ದು, ಇದಕ್ಕೆ ನ್ಯಾಯಾಧೀಶರು ಅನುಮತಿ ನೀಡಿದರು.

Loading

Leave a Reply

Your email address will not be published. Required fields are marked *