ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್’ಲಾಲ್ ಶರ್ಮಾ ಆಯ್ಕೆ

ಜೈಪುರ: ಛತ್ತೀಸ್‌ಗಢ, ಮಧ್ಯಪ್ರದೇಶದ ರೀತಿಯಲ್ಲಿ ರಾಜಸ್ಥಾನದಲ್ಲೂ (Rajasthan) ಬಿಜೆಪಿ (BJP) ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದ್ದು, ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ (Bhajan Lal Sharma) ಅವರನ್ನು ಆಯ್ಕೆ ಮಾಡಿದೆ.

ಇವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಾಗಿದ್ದು, ಈ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೊಂದು ಅಚ್ಚರಿಯ ಆಯ್ಕೆ ಮಾಡಿದೆ. ಮುಂದಿನ ಲೋಕಸಭೆ ಚುನಾವಣೆಗಾಗಿ ಹೊಸ ಮುಖಗಳನ್ನು ಬಿಜೆಪಿ ಹೈಕಮಾಂಡ್ ಮಾಡಿದಂತಿದೆ. ಈ ಮೂಲಕ ಛತ್ತೀಸ್‌ಗಢ, ಮಧ್ಯಪ್ರದೇಶ ಇದೀಗ ರಾಜಸ್ಥಾನದಲ್ಲಿಯೂ ಹೊಸ ಮುಖಕ್ಕೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.

ಸಾಂಗನೇರ್ ಕ್ಷೇತ್ರದ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ಅಮಿತ್ ಶಾ ಆಪ್ತರಾಗಿದ್ದಾರೆ. ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಭಜನ್ ಲಾಲ್ ಶರ್ಮಾ ಬ್ರಾಹಣ ಸಮುದಾಯದವರಾಗಿದ್ದು, 48,000 ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಪ್ರೇಮ್ ಚಂದ್ ಬೈರ್ವಾ ಹಾಗೂ ದಿಯಾ ಕುಮಾರಿ ಅವರು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

Loading

Leave a Reply

Your email address will not be published. Required fields are marked *