ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ರಾಜಕೀಯ ಕಾರಣಗಳಿಗಾಗಿ ಸರ್ಕಾರಿ, ಅರೆಸರ್ಕಾರಿ ಹಾಗೂ ಅನುದಾನಿತ ಪ್ರಾಧಿಕಾರಗಳಿಗೆ ಮತ್ತು ಸಾಂಸ್ಕೃತಿಕ ಸಂಘಟಣೆಗಳಿಗೆ ರಾಜ್ಯದ ಬಿಜೆಪಿ ಸರ್ಕಾರ ಬಿಜೆಪಿ ಪ್ರೇರಿತ ಕಾರ್ಯಕರ್ತರನ್ನು ಮತ್ತು ಬಿಜೆಪಿ ಪರವಾದ ಸ್ವಯಃ ಘೋಷಿತ ವಿಚಾರವಾದಿಗಳನ್ನು ನೇಮಕ ಮಾಡಿದ್ದು, ಕರ್ನಾಟಕ ಬಿಜೆಪಿ ಸರ್ಕಾರದ ಮೂಲಕ ನೇಮಕಗೊಂಡಿರುವ ಈ ಸಂಸ್ಥೆಗಳ ಅಧ್ಯಕ್ಷರು ಮತ್ತು ಸದಸ್ಯರು ನೈತಿಕ ಹೊಣೆ ಹೊತ್ತು ಕೂಡಲೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು.
ಕೆಲವು ಸಂಸ್ಥೆಗಳು ಹಿಂದಿನ ದಿನಾಂಕ ನಮೂದಿಸಿ ಬಿಲ್‌ಗಳನ್ನು ಪಾವತಿ ಮಾಡಿರುವುದು ಮತ್ತು ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇಂತಹ ಅಕ್ರಮ ಚಟುವಟಿಕೆಗಳ ಮೇಲೆ ಹೊಸ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಒತ್ತಾಯಿಸಿದ್ದಾರೆ.