ಕಲಬುರಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು…ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್ ನೇಣಿಗೆ ಶರಣಾಗಿದ್ದ. ಆದ್ರೆ, ಇದೀಗ ಈ ಆತ್ಮಹತ್ಯೆಯನ್ನು ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ. ಸ್ವತಃ ಶಿವಕುಮಾರ್ ಪತ್ನಿ ಮಲ್ಲಮ್ಮ ಅವರು ರೈತ ಆತ್ಮಹತ್ಯೆ ಎಂದು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲಾಗಿದೆ..
ತನ್ನ ಪತಿ 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಮಳೆಯಾಗದೇ ಇದ್ದಿದ್ದರಿಂದ ಹೆಸರು ಬೆಳೆ ಹಾಳಾಗಿ ಹೋಗಿತ್ತು. ಸಾಲ ತೀರಿಸಲಿಕ್ಕಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಲ್ಲಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪತಿಯ ಆತ್ಮಹತ್ಯೆ ಕೇಸ್ ನಲ್ಲಿ ಯಾರ ಮೇಲೆ ಕೂಡಾ ಅನುಮಾನ ಇಲ್ಲ ಎಂದು ಉಲ್ಲೇಖವಾಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.