ತುಮಕೂರು: ಜಿಲ್ಲೆ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿಯಾಗಿದ್ದು ಇಬ್ಬರು ಮೃತಪಟ್ಟ ಘಟನೆ ಜರುಗಿದೆ. 28 ವರ್ಷದ ಪ್ರಭುಗೌಡ, 30 ವರ್ಷದ ಆನಂದ್ ಮೃತ ದುರ್ದೈವಿಗಳು ಎನ್ನಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೃತರು ಉತ್ತರ ಕರ್ನಾಟಕ ಮೂಲದವರು ಎನ್ನಲಾಗಿದೆ. ಪ್ರಭುಗೌಡ ಸ್ಥಳದಲ್ಲೇ ಮೃತಪಟ್ಟಿದ್ದು ಆನಂದ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಪಂಚರ್ ಆಗಿ ನಿಂತಿದ್ದ ಮಿನಿ ಟೆಂಪೋ ಲಾರಿಗೆ ಬೈಕ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.