ಮೈಸೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಕರಾಟೆ ಪಟುವೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಸಮೀಪ ನಡೆದಿದೆ. ಕಿರಣ್ ರಾಜ್ (22) ಮೃತ ದುರ್ದೈವಿ. ನಂಜನಗೂಡು ತಾಲೂಕಿನ ನೇರಳೆ ಗ್ರಾಮದ ನಿವಾಸಿಯಾದ ಇವರು ಸ್ನೇಹಿತನಿಗೆ ಬೈಕ್ ನೀಡಲು ಮೈಸೂರಿಗೆ ಹೊರಟಿದ್ದರು.
ಮೈಸೂರು ಸಮೀಪದ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಗರಿ ರಸ್ತೆಗೆ ಬಿದ್ದಿರುವ ಕಿರಣ್ ರಾಜ್, ತೀವ್ರ ಗಾಯಗಳೊಂದಿಗೆ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.