ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ BJP ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ: ಯಡಿಯೂರಪ್ಪ

ಬೆಂಗಳೂರು: ಬಜರಂಗದಳವನ್ನು ಟಚ್‌ ಮಾಡಿದರೆ ಭಸ್ಮವಾಗಿ ಬಿಡ್ತೀರಾ ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (Former CM BS Yeddyurappa) ಆಕ್ರೋಶ ಹೊರ ಹಾಕಿದ್ದಾರೆ. ದಾಸರಹಳ್ಳಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಬಜರಂಗ ನಿಷೇಧ (Bajrang ban in the country)ಮಾಡುವುದಿರಲಿ, ಬಜರಂಗದಳವನ್ನು ಮುಟ್ಟಿದರೆ ನೀವು ಭಸ್ಮವಾಗುತ್ತೀರಾ ಎಂದರು.

ಇನ್ನೂ ಪ್ರಧಾನಿ ಮೋದಿ ಅವರು ಕರ್ನಾಟಕದ ಬಗ್ಗೆ ವಿಶೇಷ ಅಭಿಮಾನ ಗೌರವ ಇಟ್ಟುಕೊಂಡಿದ್ದಾರೆ. ಅವರಿಗೆ ಗೌರವ ತರಬೇಕಾದರೆ ಬೆಂಗಳೂರಿನಲ್ಲಿ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬೇಕಾಗಿದೆ.

ರಾಜ್ಯದಲ್ಲಿ 130-135 ಸೀಟು ಗೆದ್ದು ಈ ಭಾರಿ ಸ್ಪಷ್ಟಬಹುಮತದಿಂದ ಯಾರ ಹಂಗಿಲ್ಲದೇ ಅಧಿಕಾರಕ್ಕೆ ಬರುತ್ತದೆ. ಸೂರ್ಯ ಚಂದ್ರ ಇರುವುದು ಎಷ್ಟುಸತ್ಯವೋ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಭವಿಷ್ಯ ನುಡಿದರು. ನೀವು ಪ್ರಾಮಾಣಿಕವಾಗಿ ಪಕ್ಷದ ಪರ ಮನೆ ಮನೆಗಳಿಗೆ ತೆರಳಿ ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ ಜೆಡಿಎಸ್‌ ಪಕ್ಷಕ್ಕೆ ಮತ ಹಾಕಿಸದಂತೆ ಕೆಲಸ ಮಾಡಿ. ಮುನಿರಾಜು ಅವರನ್ನು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಕೊಡಬೇಕು ಎಂದು ಮನವಿ ಮಾಡಿದ ಬಿಎಸ್‌ವೈ, ಚುನಾವಣೆ ಮುಗಿದ ನಂತರ ನಾನು ಮತ್ತೊಮ್ಮೆ ದಾಸರಹಳ್ಳಿಗೆ ವಿಜಯೋತ್ಸವ ಆಚರಿಸಲು ಬರುತ್ತೇನೆ ಎಂದು ಹೇಳಿದ್ದಾರೆ.

Loading

Leave a Reply

Your email address will not be published. Required fields are marked *