ಬಿಜೆಪಿಯವರು ಇತಿಹಾಸ ತಿರುಚುವ ಕೆಲಸ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ನೂರಾರು ಎಕರೆ ಸರ್ಕಾರಿ ಜಾಗವನ್ನು ಆರ್ಎಸ್ಎಸ್ ಸೇರಿದಂತೆ ತಮ್ಮ ಸಂಸ್ಥೆಗಳಿಗೆ ನೀಡಿದ್ದಾರೆ . ತಮ್ಮ ಪಕ್ಷ ಹಾಗೂ ಪಕ್ಷದ ಸಿದ್ಧಾಂತ ಬೆಳವಣಿಗೆಗೆ ಹೀಗೆ ಮಾಡಿದ್ದು , ಕಾನೂನು ಉಲ್ಲಂಘಿಸಿ ಭೂಮಿ ನೀಡಿರುವುದರ ಕುರಿತು ಸಿಎಂ ಹಾಗೂ ಕಂದಾಯ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಹೇಳಿದ್ದಾರೆ. ಬಿಜೆಪಿಯವರು ಇತಿಹಾಸ ತಿರುಚುವ ಕೆಲಸ ಮಾಡಿದ್ದಾರೆ. ಅಧಿಕಾರದಲ್ಲಿದ್ದಾಗ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದರು. ಇದೇ ಕಾರಣಕ್ಕೆ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದರು ಎಂದು ಬಿಜೆಪಿ ವಿರುದ್ದ ಸಚಿವರು ಆರೋಪಗಳ ಸುರಿಮಳೆ ಸುರಿಸಿದ್ದಾರೆ. ರಾಜ್ಯದ ಡಯಾಲಿಸಿಸ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇದೆ. ಹಾಗಾಗಿ ರಾಜ್ಯದಲ್ಲಿ 108 ಡಯಾಲಿಸಿಸ್ ಟೆಂಡರ್ಗಳನ್ನು ರದ್ದುಪಡಿಸಿದ್ದೇವೆ. ಅಧಿಕಾರಿಗಳು, ವೈದ್ಯರ ಕಾರ್ಯ ನಿರ್ವಹಣೆ ಸರಿಪಡಿಸಬೇಕಿದೆ. ಸಾಮಾನ್ಯ ಜನರಿಗೆ ಗುಣಮಟ್ಟದ ಚಿಕಿತ್ಸೆ ಕೊಡಿಸುತ್ತೇವೆ ಎಂದು ಹೇಳಿದ್ದಾರೆ.