ಬೆಂಗಳೂರು: ಆಪರೇಷನ್ ಕಮಲ ಮಾಡಬೇಕಾದರೆ 65 ಶಾಸಕರು ಬೇಕು. ಬಿಜೆಪಿಗೆ ಅಷ್ಟು ಶಾಸಕರು ಸಿಗುತ್ತಾರಾ? ಐದು ಶಾಸಕರು ಕೂಡ ಸಿಗಲ್ಲ. ಆಪರೇಷನ್ ನಂತರ ಬಿಜೆಪಿಯವರ ಕಥೆ ಏನಾಗಿದೆ ಗೊತ್ತಿದೆಯಲ್ಲ. ಬಿಜೆಪಿ ಮುಳುಗುತ್ತಿರೋ ಹಡಗಲ್ಲ ಈಗಾಗಲೇ ಮುಳುಗಿರುವ ಹಡಗು. ಬಿಜೆಪಿಯಲ್ಲಿ ನಾಯಕರಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿಯಲ್ಲಿ ಏನೂ ಉಳಿದಿಲ್ಲ, ಸಂಪೂರ್ಣ ನಿರ್ಣಾಮವಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ಮಾಡಿದರು.