ದಾವಣಗೆರೆ: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಶುರುವಾಗಿದೆ. ರಾಜಕೀಯ ಧ್ರುವೀಕರಣದ ಹೆಸರಲ್ಲಿ ಆಪರೇಶನ್ ಕಮಲ-2 ಸದ್ದಿಲ್ಲದೇ ಆರಂಭವಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಹೌದು 50 ಕೋಟಿ ರೂ. ಅಮಿಷವೊಡ್ಡಿ ಕಾಂಗ್ರೆಸ್ ಶಾಸಕರನ್ನ ಸೆಳೆಯಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ವಿಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಹೊಸ ಬಾಂಬ್ ಸಿಡಿಸಿದ್ದಾರೆ.. ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರವಿಕುಮಾರ್ ಗಣಿಗ, 50 ಕೋಟಿ ಅಮಿಷವೊಡ್ಡಿ ಕಾಂಗ್ರೆಸ್ ಶಾಸಕರನ್ನ ಸೆಳೆಯಲು ಬಿಜೆಪಿ ಮುಂದಾಗಿದೆ. ನಮ್ಮ ನಾಲ್ವರು ಶಾಸಕರನ್ನ ಸಂಪರ್ಕಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಮ್ಮ ಬಳಿ ಇದೆ. ಸ್ಪೇಷಲ್ ಫ್ಲೈಟ್ ಬುಕ್ ಮಾಡುತ್ತೇವೆ. 50 ಕೋಟಿ ರೂ ಕೊಡ್ತವೆ ಎಂದು ಹೇಳುತ್ತಿದ್ದಾರೆ.
ಬಿಎಸ್ ವೈ ಪಿಎ ಆಗಿದ್ದ ಸಂತೋಷ್ ಕೂಡ ಇದ್ದಾರೆ. ಖಾಸಗಿ ಹೋಟೆಲ್ ನಲ್ಲಿ ನಮ್ಮ ಶಾಸಕರನ್ನ ಭೇಟಿ ಮಾಡಿದ್ದಾರೆ. ಯಾರು ಓಡಾಡುತ್ತಿದ್ದಾರೆ ಎಂಬ ಬಗ್ಗೆ ವಿಡಿಯೋ ಇದೆ. ಕೆಲವೇ ದಿನಗಳಲ್ಲಿ ವಿಡಿಯೋ ಬಿಡುಗಡೆ ಮಾಡುತ್ತೇವೆ. ಬಿಜೆಪಿಯವರ ಆಮಿಷಕ್ಕೆ ನಮ್ಮವರು ಬಲಿಯಾಗಲ್ಲ ಎಂದರು. ಎರಡುವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಡಿಕೆ ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರು ಸಿಎಂ ಆಗುವುದರಲ್ಲಿ ಯಾವುದೇ ಗೊಂದಲವಿಲ್ಲ. ಹೈಕಮಾಂಡ್ ನಲ್ಲಿ ಏನು ಆಗಿದೆಯೂ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷರಾದವರು ಸಿಎಂ ಆಗಬೇಕು ಎಂದು ರವಿಕುಮಾರ್ ಗಣಿಗ ತಿಳಿಸಿದರು.