ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ( BJP) ಹೀನಾಯ ಸೋಲು ಕಂಡಿದ್ದು, ಬಿಜೆಪಿ ನಾಯಕರು ಸೋಲಿನ ಪರಾಮರ್ಶೆಯಲ್ಲಿ ತೊಡಗಿದ್ದಾರೆ.
ಇಂದು ಬೆಂಗಳೂರಿನ ಆರ್ ಟಿ ನಗರದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ.
ಶಾಸಕ ಸುನೀಲ್ ಕುಮಾರ್, ಪರಾಜಿತ ಅಭ್ಯರ್ಥಿ ಸಿಟಿ ರವಿ ಮತ್ತಿತರರು ಬೊಮ್ಮಾಯಿ ನಿವಾಸಕ್ಕೆ ಆಗಮಿಸಿದ್ದಾರೆ. ಚುನಾವಣಾ ಸೋಲಿಗೆ ಕಾರಣಗಳೇನು ಎಂಬ ವಿಷಯದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.