ಬೆಂಗಳೂರು : ರಾಜ್ಯದಲ್ಲಿ ನರೇಂದ್ರ ಮೋದಿ ಹೆಸರಿನಲ್ಲಿ ಬಿಜೆಪಿ ಚುನಾವಣೆ ಮಾಡಿದೆ. ಹೀಗಾಗಿ ಇದು ಮೋದಿಯವರ ಸೋಲು ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನರೇಂದ್ರ ಮೋದಿ ಹೆಸರಿನಲ್ಲಿ ಬಿಜೆಪಿ ಚುನಾವಣೆ ಮಾಡಿದೆ.
ಮೋದಿ ಹೆಸರಿನಲ್ಲಿ ಚುನಾವಣೆ ಮಾಡಿದ ಬಿಜೆಪಿಗೆ ಸೋಲಾಗಿದೆ. ಹೀಗಾಗಿ ಇದು ಮೋದಿಯವರ ಸೋಲು ಎಂದು ಹೇಳಿದ್ದಾರೆ.
ಇಂದು ಅಥವಾ ನಾಳೆ ಶಾಸಕಾಂಗ ಸಭೆ ನಡೆಸಿ ಮುಖ್ಯಮಂತ್ರಿ ಆಯ್ಕೆ ಮಾಡಲಾಗುತ್ತದೆ. ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಹಿರಿಯರ ಮಾರ್ಗದರ್ಶನದಲ್ಲಿ ಸಿಎಂ ಆಯ್ಕೆ ಆಗಲಿದೆ, ಕರ್ನಾಟಕದ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿ, ಕರ್ನಾಟಕದ ಫಲಿತಾಂಶ ಬಿಜೆಪಿಯ ಎಚ್ಚರಿಕೆಯ ಗಂಟೆಯಾಗಿದೆ ಎಂದರು.