ಚಿಕ್ಕಮಗಳೂರು:-ಬಿಜೆಪಿ ಆಪರೇಷನ್ ಸಕ್ಸಸ್ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಮ್ಮ ಸರ್ಕಾರ ಗಟ್ಟಿಯಾಗಿದೆ. ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಪ್ರಯತ್ನ ಫಲಿಸುವುದಿಲ್ಲ.
ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಬೆದರಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ಇದೆಯೇ ಎಂಬ ಪ್ರಶ್ನೆಗೆ ಆ ಇಲಾಖೆ ನನ್ನ ಕೈಕೆಳಗೆ ಕೆಲಸ ನಿರ್ವಹಿಸುತ್ತಿದೆ. ಈ ವಿಚಾರ ಮೊದಲು ನನಗೆ ತಿಳಿಯಬೇಕಲ್ಲವೇ ಇದೆಲ್ಲ ಸುಳ್ಳು ಎಂದು ಅಲ್ಲಗಳೆದರು. ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ತುಳಿತದಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ.