ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಯಾಱರಿಗೆ ಏನು ಉತ್ತರ ಕೊಡಬೇಕು ಕೊಡುತ್ತೇವೆ.
ಹೈವೋಲ್ಟೇಜ್’ಗೂ ಕೊಡುತ್ತೇವೆ, ಲೋವೋಲ್ಟೇಜ್’ಗೂ ಉತ್ತರಿಸುತ್ತೇವೆ. ನಕಲಿಗೂ ಉತ್ತರಿಸುತ್ತೇವೆ, ಲೂಟಿಗಳಿಗೂ ಉತ್ತರ ಕೊಡುತ್ತೇವೆ. ಎಲ್ಲ ವಿಚಾರಗಳ ಬಗ್ಗೆಯೂ ಬಿಚ್ಚಿಡುತ್ತೇನೆ. ಬಿಜೆಪಿಗರು ಪ್ರತಿಭಟಿಸಲಿ, ಲೂಟಿಕೊರರು ಪ್ರತಿಭಟನೆ ಮಾಡಲಿ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದರು.