ಬೆಂಗಳೂರು: ಸಿಎಂ ಸಿದ್ದರಾಮಯ್ಯ ದುರುದ್ದೇಶದಿಂದ ಗೊಂದಲ ಉಂಟು ಮಾಡಲು ಕೇಂದ್ರ ಸರ್ಕಾರದ ಮೇಲೆ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದಾರೆ. ಸಿದ್ದರಾಮಯ್ಯ ಸುಳ್ಳು ಹೇಳಿ ಮೋಸ ಮಾಡುವುದರಲ್ಲಿ ನಿಸ್ಸೀಮರು. ಮೀಸಲಾತಿಗೆ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಮೀಸಲಾತಿ ಕೊಡುವುದಾಗಿ ಕಾಂಗ್ರೆಸ್ ಹೇಳಿತ್ತು. ಬಿಜೆಪಿ ಸರ್ಕಾರ ಇದ್ದಾಗ ಸಂಪುಟ ಉಪಸಮಿತಿ ರಚಿಸಿ, ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಕಲ್ಪಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಎಸ್ಸಿ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ತಿದ್ದುಪಡಿಗೆ ಶಿಫಾರಸ್ಸು ಮಾಡಲಾಗಿತ್ತು. ಬಿಜೆಪಿ, ಆರ್ ಎಸ್ಎಸ್ ಸಾಮಾಜಿಕ ನ್ಯಾಯದ ಪರ ಇದೆ. ಸಂವಿಧಾನಬದ್ಧ ಆಡಳಿತ ಮಾಡಿದ್ದೇವೆ. ಸಿದ್ದರಾಮಯ್ಯ ಅವರ ಮಾತಿಗೆ ಯಾರೂ ಕಿವಿಗೊಡಬಾರದು ಎಂದು ಎಸ್ಸಿ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಗೋವಿಂದ ಕಾರಜೋಳ ಸಿಎಂ ವಿರುದ್ಧ ವಾಗ್ದಾಳಿ ಮಾಡಿದರು.