ಬೆಂಗಳೂರು: ಸರ್ಕಾರ ಉರುಳಿಸುವ ತಂತ್ರದ ಬಗ್ಗೆ ಡಿಕೆ ಶಿವಕುಮಾರ್ ನೀಡಿದ ಹೇಳಿಕೆ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಬಿಜೆಪಿಯವರು ದೇಶಾದ್ಯಂತ ಜನರಿಂದ ಆಯ್ಕೆ ಆದ ಸರ್ಕಾರ ಉರುಳಿಸುವುದರಲ್ಲಿ ಪರಿಣಿತರು. ಬೇರೆ ಬೇರೆ ರಾಜ್ಯದಲ್ಲಿ ಅನೇಕ ಸರ್ಕಾರ ಪತನಗೊಳಿಸಿದ್ದಾರೆ. ಹಾಗಾಗಿ ನಾವು ಎಚ್ಚರಿಕೆಯಿಂದ ಇರಬೇಕು. ಅಧಿಕಾರಕ್ಕಾಗಿ ಅವರು ಏನು ಮಾಡುವುದಕ್ಕೂ ಹೇಸುವುದಿಲ್ಲ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕಾಗುತ್ತದೆ. ಡಿಕೆ ಶಿವಕುಮಾರ್ ಅವರಿಗೆ ಮಾಹಿತಿ ಇರಬಹುದು, ಹಾಗಾಗಿ ಮಾತಾಡಿದ್ದಾರೆ. ಹಿಂದಿನ ಸಚಿವರೋ ಅಥವಾ ಸಿಎಂ ಅವರೋ ಒಂದು ಹೇಳಿಕೆ ಕೊಟ್ಟಿದ್ದನ್ನ ನೋಡಿದ್ದೇನೆ. ಹಾಗಾಗಿ ಸರ್ಕಾರ ಉಳಿಸುವ ಪ್ರಯತ್ನ ಮಾಡುತ್ತಾ ಇರಬಹುದು ಎಂದರು.