ರಾಜ್ಯದಲ್ಲಿ 28ಕ್ಕೆ 28 ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಕಾಂಗ್ರೆಸ್ ನಿರ್ನಾಮ ಮಾಡುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ದೇಶದಲ್ಲಿ ಕಾಂಗ್ರೆಸ್ ಬೇಡ ಎಂದು ಜನ ತೀರ್ಮಾನ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಗಳೆಲ್ಲರೂ ಕೂಡ ಒಟ್ಟಾಗಬೇಕು. ಕಾಂಗ್ರೆಸ್ ನಿರ್ನಾಮ ಮಾಡಬೇಕೆಂಬ ಉದ್ದೇಶದಿಂದ ಬಿಜೆಪಿ (BJP), ಜೆಡಿಎಸ್ (JDS) ಮೈತ್ರಿ ಮಾಡಿಕೊಂಡಿದ್ದೇವೆ ಎಂದರು.

ಈ ಹಿಂದೆ ಕಾಂಗ್ರೆಸ್ ವಿರೋಧಿ ಮತಗಳು ವಿಭಜನೆಯಾಗಿ ಕಾಂಗ್ರೆಸ್ ಲಾಭ ಗಳಿಸಿತ್ತು. ಜೊತೆಗೆ ಕಳೆದ ಚುನಾವಣೆ ವೇಳೆ ರಾಜ್ಯದಲ್ಲಿ ಒಂದು ಸ್ಥಾನ ಸಹ ಗೆದ್ದಿತ್ತು. ಈ ಬಾರಿ 1 ಸ್ಥಾನ ಕಾಂಗ್ರೆಸ್ಗೆ ಕೊಡಬಾರದು ಎಂದು ತೀರ್ಮಾನ ಮಾಡಿದ್ದೇವೆ. ರಾಜ್ಯದಲ್ಲಿ 28ಕ್ಕೆ 28 ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ಸ್ಪಷ್ಟನೆ ನೀಡಿದರು

Loading

Leave a Reply

Your email address will not be published. Required fields are marked *