ತುಮಕೂರು: ಬಿಜೆಪಿ ಸೋಲನ್ನು ಒಪ್ಪಿಕೊಂಡಿದ್ದೇವೆ. ಹಾಗಂತ ಈ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿ.ಎಲ್ ಸಂತೋಷ್ ಕಾರಣವಲ್ಲ ಎಂಬುದಾಗಿ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸೋಲಿನ ಬಗ್ಗೆ ಹಲವಾರು ರೀತಿಯ ಚರ್ಚೆ ನಡೆಯುತ್ತಿವೆ.
ಪಕ್ಷ ಪುನರ್ ಸಂಘಟನೆ ಬಗ್ಗೆ ಚರ್ಚೆ ನಡೆಯುತ್ತಿದೆ. ಅದನ್ನು ಪಕ್ಷದ ವರಿಷ್ಠರು ನೋಡಿಕೊಳ್ಳಲಿದ್ದಾರೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು, ಬಿಜೆಪಿ ಸೋಲು ಮುಂಬರುವಂತ ಲೋಕಸಭಾ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪಕ್ಷವನ್ನು ಆ ವೇಳೆಗೆ ಪುನರ್ ಸಂಘಟಿಸುವಂತ ಕೆಲಸವನ್ನು ಪಕ್ಷದ ನಾಯಕರು ಮಾಡಲಿದ್ದಾರೆ ಎಂದು ಹೇಳಿದರು.