ರಾಘು- ಸ್ಪಂದನಾ ಅನೋನ್ಯವಾಗಿ ಬದುಕುತ್ತಿದ್ದರು. ಸ್ಪಂದನಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ನಟಿ ಮೇಘನಾ ರಾಜ್ ಮನವಿ ಮಾಡಿದ್ದಾರೆ.
ಸ್ಪಂದನಾ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಕ್ಕೆ ನಟಿ ಮೇಘನಾ ಮಾತನಾಡಿದ್ದಾರೆ. ರಾಘು-ಸ್ಪಂದನಾ ನಮಗೆ ಬಹಳ ಆತ್ಮೀಯರಾಗಿದ್ದರು.
ಏನು ನಡೆದಿದೆ, ಏನು ಆಗಿದೆ ಅನ್ನೋದು ಅವರ ಕುಟುಂಬಕ್ಕೆ ತಿಳಿದಿರುತ್ತದೆ. ಸ್ಪಂದನಾ ಬಗ್ಗೆ ಅಪಪ್ರಚಾರ ಮಾಡಬೇಡಿ. ಆಕೆಗೆ ಮರ್ಯಾದೆ ಕೊಡಿ. ಸೋಷಿಯಲ್ ಮೀಡಿಯಾದಲ್ಲಿ ಇಲ್ಲದೇ ಇರುವ ಸುದ್ದಿಗಳನ್ನ ಹರಡಬೇಡಿ.
ಅವರ ಕುಟುಂಬಕ್ಕೆ ಸ್ಪೆಸ್ ಕೊಡಿ ಹಾಗೆ ರಾಘು- ಸ್ಪಂದನಾ ನನ್ನ ಫಾಮಿಲಿ ಇದ್ದಂತೆ. ನಾವು ಇರೋ ಪರಿಸ್ಥಿತಿಯಲ್ಲಿ ಇನ್ನೊಂದು ಕುಟುಂಬನ ಹಾಗೇ ನೋಡೋಕೆ ಆಗಲ್ಲ. ನಮ್ಮ ಕುಟುಂಬನೇ ಅವರು. ನನ್ನ ಕುಟುಂಬಕ್ಕೆ ಆಗಿರೋ ನೋವಿದು ಎಂದು ನಟಿ ಮೇಘನಾ ರಾಜ್ ಹೇಳಿದ್ದಾರೆ.