ಇನ್ನು 3 ತಿಂಗಳಲ್ಲಿ ಅರ್ಹರಿಗೆ BPL, APL ಕಾರ್ಡ್ ನೀಡಲಾಗುತ್ತೆ: ಸಚಿವ ಮುನಿಯಪ್ಪ

ಹಾಸನ: ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ ಎಂದು ಆಹಾರ&ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ತಿಳಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಲಕ್ಷ ಜನರು ಅರ್ಜಿ ಹಾಕಿದ್ದರು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚಿಸಲಾಗಿದೆ.

ಇನ್ನು 3 ತಿಂಗಳಲ್ಲಿ ಅರ್ಹರಿಗೆ BPL, APL ಕಾರ್ಡ್ ನೀಡಲಾಗುತ್ತೆ. ಬ್ಯಾಂಕ್ ಖಾತೆ ಇಲ್ಲದಿದ್ದಕ್ಕೆ ಕೆಲವರ ಕಾರ್ಡ್ ರದ್ದಾಗಿತ್ತು. ಈ ಬಗ್ಗೆಯೂ ಕೂಡ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಯಾರು ಅರ್ಹರಿರುತ್ತಾರೋ ಅವರಿಗೆ ಯಾವ ತೊಂದರೆ ಆಗುವುದಿಲ್ಲ. ಎಲ್ಲವನ್ನೂ ಪರಿಶೀಲನೆ ಮಾಡಿ ಅಕ್ಕಿ ವಿತರಣೆ ಬಗ್ಗೆ ಕ್ರಮ ವಹಿಸುತ್ತೇವೆ ಎಂದರು.

 

Loading

Leave a Reply

Your email address will not be published. Required fields are marked *