ಬೆಂಗಳೂರಿನಲ್ಲಿ ಆಟೋ ಚಾಲಕನ ಬರ್ಬರ ಕೊಲೆ

ಬೆಂಗಳೂರು:- ಬೆಂಗಳೂರಿನ ಟಿಂಬರ್​ಲೇಔಟ್​ನಲ್ಲಿ ಆಟೋ ಚಾಲಕನ ಬರ್ಬರ ಕೊಲೆ ನಡೆದ ಘಟನೆ ಜರುಗಿದೆ. 24 ವರ್ಷದ ಅರುಣ್​ಗೆ ಕೊಲೆಯಾದ ದುರ್ದೈವಿ. ಮುಂದಿನ ತಿಂಗಳು ಮದುವೆ ಫಿಕ್ಸ್ ಆಗಿತ್ತು. ಆದ್ರೆ, 10ಕ್ಕೂ ಹೆಚ್ಚು ದುಷ್ಕರ್ಮಿಗಳು ಅರಣ್​ನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ಪರಿಶೀಲಿಸಿದ್ದು, ಕೊಲೆಗೆ ಕಾರಣವೇನು ಎನ್ನುವುದನ್ನು ತನಿಖೆ ಕೈಗೊಂಡಿದ್ದಾರೆ.

ಆಟೋ ಚಾಲಕ ಅರುಣ್ ಯುವತಿಯೊಬ್ಬಳನ್ನ ಪ್ರೀತಿಸುತ್ತಿದ್ದ. ಆ ಪ್ರೀತಿಯೊಂದಿಗೆ ಮದುವೆಯಾಗಿ ಸಂಸಾರ ಶುರು ಮಾಡಬೇಕಿದ್ದ. ಅದಕ್ಕೆ ಅಂತಾಲೇ ಮುಂದಿನ ತಿಂಗಳು ಮದುವೆ ಫಿಕ್ಸ್​ ಆಗಿತ್ತು ಎಂದು ತಿಳಿದು ಬಂದಿದೆ.

Loading

Leave a Reply

Your email address will not be published. Required fields are marked *