ಹೈಕಮಾಂಡ್ ಅಂದ್ರೆ ನಮಗೆ ಬಿ.ಎಸ್.ಯಡಿಯೂರಪ್ಪ: ಎಸ್.ಟಿ.ಸೋಮಶೇಖರ್

ಬೆಂಗಳೂರು: ವೈಯಕ್ತಿಕವಾಗಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ನನ್ನ ಸಹಮತ ಇಲ್ಲ. ‘ಹೈಕಮಾಂಡ್ ಅಂದ್ರೆ ನಮಗೆ ಬಿ.ಎಸ್.ಯಡಿಯೂರಪ್ಪ’. ನಾನು ಹೇಳುವವರೆಗೂ ಏನೂ ಮಾಡಬೇಡಿ ಎಂದು ಅವರು ಹೇಳಿದ್ದಾರೆ. ಅದಕ್ಕಾಗಿ ನಾನು ಒಂದು ತಿಂಗಳಿಂದ ಎಲ್ಲೂ ಏನನ್ನೂ ಮಾತನಾಡಿಲ್ಲ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಬಿಜೆಪಿಯಲ್ಲಿ ಮಾನಸಿಕವಾಗಿ ಕಿರುಕುಳ ಇದೆ. ಅಧಿಕೃತವಾಗಿ ಮೈತ್ರಿಯಾದ ಬಳಿಕ ನಿರ್ಧಾರ ಮಾಡ್ತೀನಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇತ್ತು. ಅವರು ಇವರಿಗೆ ಮತ ಹಾಕಲಿಲ್ಲ, ಇವರು ಅವರಿಗೆ ಮತ ಹಾಕಲಿಲ್ಲ ಯಾರೂ ಕೂಡ ಈ ಬಗ್ಗೆ ವಯಕ್ತಿಕವಾಗಿ ಮಾತನಾಡ್ತಿಲ್ಲ. ಆದ್ರೆ ಎಲ್ಲರಿಗೂ ಅಸಮಾಧಾನ ಅಂತೂ ಇದೆ. ನಮ್ಮ ಪಕ್ಷದಲ್ಲಿ ಯಾರನ್ನೂ ಕರೆದು ಚರ್ಚೆ ಮಾಡಿಲ್ಲ. ಬೆಂಬಲಿಗರು ಬಿಜೆಪಿ ಬಿಡುವ ವಿಚಾರ ನನ್ನ ಕ್ಷೇತ್ರ ಅಷ್ಟೇ ಅಲ್ಲ, ಅಶೋಕ್, ಮುನಿರತ್ನ, ದಾಸರಹಳ್ಳಿ ಕ್ಷೇತ್ರಗಳಲ್ಲಿ ಹೋಗಿದ್ದಾರೆ.

ನಾನು 100% ಬಿಜೆಪಿಯಲ್ಲಿ ಇದ್ದೀನಿ ಹೋಗಿಲ್ಲ. ಆದ್ರೆ ಮೈತ್ರಿ ಬಳಿಕ ಯೋಚನೆ ಮಾಡಬೇಕಿದೆ. 6 ಬಾರಿ ಜೆಡಿಎಸ್ ಜೊತೆ ಹೊಡೆದಾಡಿಕೊಂಡು ಬಂದಿದ್ದೇವೆ. ಜೆಡಿಎಸ್ ಜೊತೆ ಮೈತ್ರಿ ವಿಚಾರ ಯಾರಿಗೂ ಆಗಲ್ಲ ಅಂತ ಕಾಂಗ್ರೆಸ್ ಸೇರ್ತಿದ್ದಾರೆ. ಜೆಡಿಎಸ್ ಅಧ್ಯಕ್ಷ ಏನು ಹೇಳ್ತಿದ್ದಾರೆ. ಯಾರೂ ನಾಲ್ಕು ಜನ ಕೂತು ಮಾತಾಡಿದ್ರೆ ಆಗಲ್ಲ ಅದು ಅಂತ. ನಾನು ಹೇಳಿದ್ದಲ್ಲ. ನನ್ನ ಬಳಿ ಕೆಲವರು ಹೇಳಿದ್ದಾರೆ. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಅಂತ ಎಂದು ಹೇಳಿದರು.

Loading

Leave a Reply

Your email address will not be published. Required fields are marked *