ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಬಿ ಎಸ್ ಯಡಿಯೂರಪ್ಪ

ಬೆಂಗಳೂರು;- ಬಿಜೆಪಿ ಮುಖಂಡ ಬಿ ಎಸ್ ಯಡಿಯೂರಪ್ಪ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೊಮ್ಮಾಯಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಬೊಮ್ಮಾಯಿ ಆರೋಗ್ಯ ವಿಚಾರಿಸಿ ಕೆಲ ಸಮಯ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದರು. ಬೊಮ್ಮಾಯಿ ಭೇಟಿ ವೇಳೆ ರಾಜಕೀಯ ಮಾತುಕತೆ ನಡೆದಿಲ್ಲ ಎನ್ನಲಾಗಿದ್ದರೂ ರಾಜ್ಯಾಧ್ಯಕ್ಷ ಸ್ಥಾನದ ವಿಚಾರದ ಕುರಿತು ಪ್ರಸ್ತಾಪವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಶೋಭಾ ಕರಂದ್ಲಾಜೆ ಹೆಸರು ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ವಿಷಯದ ಕುರಿತು ಚರ್ಚಿಸಿರಬಹುದು ಎಂದು ಮೂಲಗಳು ಹೇಳಿವೆ.

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ತೆರಳಿ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಸಿದ್ದರಾಮಯ್ಯ ಜತೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಭೇಟಿ ನೀಡಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಕೂಡ ಜತೆಗಿದ್ದರು.

Loading

Leave a Reply

Your email address will not be published. Required fields are marked *