ಹುಬ್ಬಳ್ಳಿ : ಬಿ.ಎಸ್ ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೆ ಬಿಜೆಪಿಯ ಹೀನಾಯ ಸೋಲಿಗೆ ಕಾರಣ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ ಬಿಎಸ್ ಯಡಿಯೂರಪ್ಪ ಕಣ್ಣೀರಿಗೆ ಬಿಜೆಪಿ ಸರ್ಕಾರ ಕೊಚ್ಚಿ ಹೋಗುತ್ತದೆ ಎಂದು ನಾನು ಅವತ್ತೇ ಹೇಳಿದ್ದೇ, ಇಂದು ಅದು ನಿಜವಾಯಿತು ಎಂದಿದ್ದಾರೆ.
ಬಿ.ಎಸ್ ಯಡಿಯೂರಪ್ಪ ಉತ್ತಮ ನಾಯಕರು, ಎಲ್ಲಾ ಸಮಾಜದ ನಾಯಕರು ಮುಂದುವರೆಸಬೇಕು ಎಂದು ಹೇಳಿದ್ದರು.ಆದರೆ ಬಿಜೆಪಿ ನಾಯಕರು ಬಿ.ಎಸ್ ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದರು, ನಂತರ ಯಡಿಯೂರಪ್ಪರನ್ನು ಕಡೆಗಣಿಸಿದರು. ಇದೇ ಬಿಜೆಪಿಯ ಸೋಲಿಗೆ ಕಾರಣವಾಯಿತು ಎಂದು ಹೇಳಿದ್ದಾರೆ.ಕೇಸರಿ ಪಡೆ ಎಂದು ಹೇಳಿ ಅಧಿಕಾರಕ್ಕೆ ಬಂದು, ಖಾವಿ ಧಾರಿಗಳನ್ನು ಸರಿಯಾಗಿ ನಡೆಸುಕೊಳ್ಳಲಿಲ್ಲ ಎಂದು ಕಿಡಿಕಾರಿದರು.