ಡಿಸೆಂಬ‌ರ್ ಅಂತ್ಯಕ್ಕೆ ಎಲ್ಲ ಮನೆಗಳಿಗೂ ನಳದ ಮೂಲಕ ಕುಡಿಯುವ ನೀರು ಕೊಡುವ ಕಾರ್ಯ ಪೂರ್ಣ: ಬೊಮ್ಮಾಯಿ

ಹಾವೇರಿ: ಮುಂದಿನ ಡಿಸೆಂಬರ್ ಅಂತ್ಯದ ವೇಳೆಗೆ ಶಿಗ್ಗಾವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನಲ್ಲಿ (ನಳದ) ನೀರು ಕೊಡುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾವಿ ತಾಲೂಕಿನ ತಡಸ್ ಗಾಮದಲ್ಲಿ ಗಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ 2022-23 ನೇ ಸಾಲಿನ ಜಲ ಜೀವನ ಮಿಷನ್ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆ ಅಡಿ ನಲ್ಲಿ ನೀರು ಸರಬರಾಜು ಯೋಜನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕುಡಿಯುವ ನೀರು ಒದಗಿಸಲು ಅನೇಕ ಸಮಸ್ಯೆಗಳು ನೈಸರ್ಗಿಕ ಕಾರಣದಿಂದ ಇವೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಎರಡು ಬಾರಿ ಪ್ರಸ್ತಾಪ ಮಾಡಿದ್ದರೂ, ಜಾರಿಗೆ ತರಲು ಸಾಧ್ಯವಾಗಲಿಲ್ಲ. ಆ ಸಂದರ್ಭದಲ್ಲಿ ನಮಗೆ ವರವಾಗಿ ಬಂದಿರುವಂಥದ್ದು. ಪ್ರಧಾನಿ ನರೇಂದ್ರ ಮೋದಿಯವರ ಜಲ ಜೀವನ್ ಮಿಷನ್ ಯೋಜನೆ. ಈ ಯೋಜನೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಎರಡೂ ಹಣ ನೀಡುತ್ತವೆ.

ಶಿಗ್ಗಾವಿ, ಸವಣೂರು, ಹಾನಗಲ್ ಮೂರು ತಾಲೂಕಿನ 438 ಕೋಟಿ ರೂ. ವೆಚ್ಚದ ಜಲ ಜೀವನ್ ಮಿಷನ್ ಯೋಜನೆ ಇದರಲ್ಲಿ ಸುಮಾರು ಮೂರು ಕೋಟಿ ರೂ. ತಡಸ್ ಗಾಮಕ್ಕೆ ನೀಡಲಾಗಿದ್ದು, ಸುಮಾರು 2500 ಮನೆಗಳಿಗೆ ನಲ್ಲಿ ನೀರಿನ ಸಂಪಕ್ಷ ಕಲ್ಪಿಸಲಾಗುವುದು ಎಂದು ಹೇಳಿದರು. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಈ ರಾಜ್ಯದಲ್ಲಿ ಬಹುತೇಕ ಗ್ರಾಮಗಳಿಗೆ ಸ್ವಚ್ಚ ಕುಡಿಯುವ ನೀರು ಕೊಡುವ ಸೌಲಭ್ಯ ಇರಲಿಲ್ಲ.

ಕರ್ನಾಟಕದಲ್ಲಿ 25 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದರೆ. ಆದರೆ, ಕೇವಲ ಮೂರು ವರ್ಷದಲ್ಲಿ 30 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಕೀರ್ತಿ ಹಿಂದಿನ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬೊಮ್ಮಾಯಿ ಹೇಳಿದರು. ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪಲ್ಲಾದ್ ಜೋಶಿ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.

Loading

Leave a Reply

Your email address will not be published. Required fields are marked *